6. ಪ್ರೌಢಶಾಲಾ ಮಕ್ಕಳಿಗಾಗಿ ಕತೆ ಬರೆಯುವ ಸ್ಪರ್ಧೆಗಳನ್ನು ಏರ್ಪಡಿಸಿ ಪ್ರಥಮ, ದ್ವಿತೀಯ, ತೃತೀಯ ನಗದು ಬಹುಮಾನ, ಸ್ಮರಣಿಕೆ, ಪ್ರಶಸ್ತಿ ಪತ್ರ ನೀಡಿ ಗೌರವಿಸುವ ಜೊತೆ ಉತ್ತಮ ಕಥೆಗಳನ್ನು ಆಯ್ಕೆ ಮಾಡಿ ಮಕ್ಕಳ ಕಥಾಸಂಕಲನಗಳನ್ನು ಪ್ರಕಟಿಸುವುದು.
7. ಗ್ರಂಥಾಲಯಗಳು ಹಾಗೂ ಪುಸ್ತಕೋದ್ಯಮದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುವುದು ಕನ್ನಡ ಸಾರಸ್ವತಲೋಕಕ್ಕೆ ಸಹಕಾರಿಯಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು.
8. ಪುಸ್ತಕೋದ್ಯಮದ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸುವುದು.
9. ಬರಹಗಾರ-ಪ್ರಕಾಶಕ-ಓದುಗ-ಗ್ರಂಥಾಲಯ (ಸರ್ಕಾರ) ಇವರ ಜೊತೆಯಲ್ಲಿ ಸಾಮರಸ್ಯದಿಂದ ಸೇತುವೆಯಾಗಿ ನಿಂತು ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುವುದು.